Headlines

ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಂ ಮುಖಂಡರಿಂದ ತೀವ್ರ ಆಕ್ರೋಶ – Kannada News | Rebellion in Congress: Muslim Leaders Fume Over Davanagere South Ticket; Outraged by Removal of Abdul Jabbar, Naseer Ahmed

ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಿರ್ಧಾರಗಳು ಮುಸ್ಲಿಂ ಸಮುದಾಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿವೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮೌಲಾನಾ ಶಬ್ಬೀರ್ ಅಹ್ಮದ್ ನದ್ವಿ ಹಾಗೂ ಮುಸ್ಲಿಂ ಸಮುದಾಯದ ಇತರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ, ಮೃತಪಟ್ಟ ನಾಯಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಪಕ್ಷದ ಸಂಪ್ರದಾಯ ಇದೆ. ಆದರೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮಗ ಮಲ್ಲಿಕಾರ್ಜುನ ಈಗಾಗಲೇ ಶಾಸಕ ಮತ್ತು ಸಚಿವರಾಗಿದ್ದು, ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಬಾರಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುವುದಾಗಿ ಸಾರ್ವಜನಿಕವಾಗಿ ಹೇಳಲಾಗಿತ್ತು. ಸ್ಥಳೀಯ ದಾವಣಗೆರೆ ಜನ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ರಾಜ್ಯದ ಮುಸ್ಲಿಂ ಧಾರ್ಮಿಕ ನಾಯಕರು ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಸಲ್ಲಿಸಿ ಈ ಬಾರಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು. ಆದರೆ ದುರದೃಷ್ಟವಶಾತ್, ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದೆ ಮತ್ತೆ ಅದೇ ಶಾಮನೂರು ಕುಟುಂಬದವರಿಗೆ ಟಿಕೆಟ್ ನೀಡಿದ್ದರಿಂದ ಇಡೀ ದಾವಣಗೆರೆಯ ಮುಸ್ಲಿಂ ಸಮುದಾಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ ಎಂದು ಸಮುದಾಯದ ನಾಯಕರು ಹೇಳಿದ್ದಾರೆ.

ಕರ್ನಾಟಕದ 10 ಮುಸ್ಲಿಂ ಶಾಸಕರು ಮತ್ತು ನಾಲ್ಕು ಎಂಎಲ್ಸಿಗಳು ಸಕ್ರಿಯವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಆದಾಗ್ಯೂ, ಚುನಾವಣೆಯ ನಂತರ ಎಂಎಲ್ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ಪಡೆದಿರುವುದು ಮತ್ತು ಮುಖ್ಯಮಂತ್ರಿ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ವಜಾ ಮಾಡಲಾಗಿದೆ. ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ಈ ನಿಲುವು ತೆಗೆದುಕೊಂಡಿದೆ ಎಂದು ಮುಸ್ಲಿಂ ನಾಯಕರು ಪತ್ರಿಕಾಗೋಷ್ಠಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *