ಪಂಜಾಬ್ ಕಿಂಗ್ಸ್ ತಂಡದ ವೇಗಿ ಅರ್ಶ್‌ದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧ ಅದ್ಭುತ ಬೌಲಿಂಗ್ ಮಾಡಿದರು. ಪವರ್‌ಪ್ಲೇನಲ್ಲಿ ಸತತ ಎರಡು ಎಸೆತಗಳಲ್ಲಿ ರಿಕಿ ಪಾಂಟಿಂಗ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಔಟ್ ಮಾಡುವ ಮೂಲಕ ಅವರು ಮುಂಬೈ ಇಂಡಿಯನ್ಸ್ ತಂಡದ ಬೆನ್ನೆಲುಬನ್ನು ಮುರಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಓವರ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಕೇವಲ ಒಂದು ರನ್ ನೀಡಿದರು ಆದರೆ ಎರಡನೇ ಓವರ್‌ನಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು. ಎರಡನೇ ಓವರ್‌ನ ಮೊದಲ ಎಸೆತದಲ್ಲಿ ಅರ್ಶ್‌ದೀಪ್, ರಿಕಲ್ಟನ್ ಅವರನ್ನು ಔಟ್ ಮಾಡಿದರೆ, ಮುಂದಿನ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಔಟ್ ಮಾಡಿದರು. ಈ ಮೂಲಕ ವಿಶೇಷ ದಾಖಲೆಯನ್ನು ನಿರ್ಮಿಸಿದರು.
ರಿಕಲ್ಟನ್ ಅವರನ್ನು ಔಟ್ ಮಾಡುವ ಮೂಲಕ ಅರ್ಶ್‌ದೀಪ್ ಸಿಂಗ್ ಐಪಿಎಲ್‌ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು. ಐಪಿಎಲ್‌ನಲ್ಲಿ 100 ವಿಕೆಟ್ ಪಡೆದ ಐದನೇ ಎಡಗೈ ವೇಗಿ ಮತ್ತು ಪಂಜಾಬ್ ಪರ 100 ವಿಕೆಟ್ ಪಡೆದ ಮೊದಲ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದಾಗ್ಯೂ ಅರ್ಶ್‌ದೀಪ್ ಕೆಲವು ಸಮಯದಿಂದ ಕಳಪೆ ಫಾರ್ಮ್ ನಲ್ಲಿದ್ದಾರೆ. ಪವರ್ ಪ್ಲೇನಲ್ಲಿ ವಿಕೆಟ್ ಉರುಳಿಸಲು ಹೆಸರುವಾಸಿಯಾಗಿರುವ ಅವರು ಕಳೆದ 10 ಇನ್ನಿಂಗ್ಸ್ ಗಳಲ್ಲಿ ಪವರ್ ಪ್ಲೇನಲ್ಲಿ ವಿಕೆಟ್ ಪಡೆದಿರಲಿಲ್ಲ. ಆದರೆ ಈಗ, ಮುಂಬೈ ಇಂಡಿಯನ್ಸ್ ವಿರುದ್ಧ ಪವರ್ ಪ್ಲೇನಲ್ಲಿ ರಿಕಲ್ಟನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಪಡೆದರು.
ಅರ್ಶ್‌ದೀಪ್ ಸಿಂಗ್ ತಮ್ಮ ಅಲ್ಪ ವೃತ್ತಿಜೀವನದಲ್ಲಿ ಅನೇಕ ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ಐಪಿಎಲ್ ಜೊತೆಗೆ, ಅವರು ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 100 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರುವ ಅವರಿಗೆ ಐಸಿಸಿ ಟಿ20 ವರ್ಷದ ಕ್ರಿಕೆಟಿಗ ಎಂಬ ಪ್ರಶಸ್ತಿಯೂ ಲಭಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ