
ಬೆಂಗಳೂರು, ಡಿಸೆಂಬರ್ 29: ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಗಿಲು ಲೇಔಟ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ಸಂತ್ರಸ್ತರ ಮನವಿ ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಶಾಸಕರು ಕೂಡ ಗಮನಕ್ಕೆ ತಂದು ಮಾತನಾಡಿದ್ದಾರೆ. ಕಸದ ಗುಂಡಿ ಇತ್ತು, ಅದರ ಮೇಲೆಯೇ ಮನೆ ಕಟ್ಟಿಕೊಂಡಿದ್ದಾರೆ, ಆದರೆ ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕೇರಳ ಸಿಎಂ ಆದಿಯಾಗಿ ಎಲ್ಲರೂ ರಾಜಕೀಯ ಬೆರೆಸುತ್ತಿದ್ದಾರೆ. ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ ಜೈಕಾರ ಹಾಕಿದರು. ನಮ್ಮದು ತಪ್ಪು ಇದ್ದರೆ ಧಿಕ್ಕಾರ ಕೂಗಬೇಕಿತ್ತು ಅಲ್ವಾ. ಯಾರಿಗೆ ತೊಂದರೆ ಆಗಿದೆಯೋ ಅವರಿಗೆ ನ್ಯಾಯ ಒದಗಿಸುತ್ತೇವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.