Headlines

KSFES Recruitment 2026: KSFES ನೇಮಕಾತಿ; 1828 ಅಗ್ನಿಶಾಮಕ ಹುದ್ದೆಗಳ ಬೃಹತ್ ಅಧಿಸೂಚನೆ! – Kannada News | Ksfes recruitment 2026 1828 fire operator and driver jobs in karnataka

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ. ಒಟ್ಟು 1,828 ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ವಿಶೇಷವೆಂದರೆ, ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ಚಾಲಕ ಮತ್ತು ತಂತ್ರಜ್ಞ ಹುದ್ದೆಗಳನ್ನು ವಿಲೀನಗೊಳಿಸಿ ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಶ್ರೇಣಿಯನ್ನು ಸೃಷ್ಟಿಸಿದೆ.

ಹುದ್ದೆಗಳ ವಿವರ ಮತ್ತು ವೇತನ:

ಈ ನೇಮಕಾತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಅತಿ ಹೆಚ್ಚು ಅಂದರೆ 1,502 ಸ್ಥಾನಗಳನ್ನು ಮೀಸಲಿಡಲಾಗಿದೆ. ಉಳಿದಂತೆ 294 ಎಂಜಿನ್ ಚಾಲಕರು ಮತ್ತು 32 ಚಾಲಕ ತಂತ್ರಜ್ಞ ಹುದ್ದೆಗಳು ಭರ್ತಿಯಾಗಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 83,700 ರವರೆಗಿನ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಕರ್ನಾಟಕದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಈ ಉದ್ಯೋಗಿಗಳು ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10ನೇ ತರಗತಿ, ಪಿಯುಸಿ ಅಥವಾ ರಸಾಯನಶಾಸ್ತ್ರ ವಿಷಯದಲ್ಲಿ ವಿಜ್ಞಾನ ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿಯನ್ನು 18 ರಿಂದ 38 ವರ್ಷಗಳವರೆಗೆ ನಿಗದಿಪಡಿಸಲಾಗಿದೆ. ಸರ್ಕಾರಿ ನಿಯಮದಂತೆ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಸಾಮಾನ್ಯ ವರ್ಗದವರಿಗೆ ರೂ. 250 ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕವಿರುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ದೈಹಿಕ ಸಾಮರ್ಥ್ಯ ಮತ್ತು ಆಯ್ಕೆ ಪ್ರಕ್ರಿಯೆ:

ಅಗ್ನಿಶಾಮಕ ದಳದ ಕೆಲಸಕ್ಕೆ ದೈಹಿಕ ಸದೃಢತೆ ಅತ್ಯಗತ್ಯ. ಆದ್ದರಿಂದ ಕನಿಷ್ಠ 168 ಸೆಂ.ಮೀ ಎತ್ತರ, 50 ಕೆ.ಜಿ ತೂಕ ಮತ್ತು ಎದೆಯ ಅಳತೆ 81-86 ಸೆಂ.ಮೀ ಇರುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದವರಿಗೆ ದೈಹಿಕ ಸಹಿಷ್ಣುತೆ ಮತ್ತು ಸಾಮರ್ಥ್ಯ ಪರೀಕ್ಷೆಗಳನ್ನು (PST/PET) ನಡೆಸಿ ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅಧಿಕೃತ ಅಧಿಸೂಚನೆ ಪ್ರಕಟವಾದ ನಂತರ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ, ಫೋನ್ ಸಂಖ್ಯೆ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಮುಖ್ಯ. ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ, ಶುಲ್ಕ ಪಾವತಿಸಿದ ನಂತರ ಅರ್ಜಿಯನ್ನು ಸಲ್ಲಿಸಿ ಅದರ ಪ್ರತಿಯನ್ನು ಮುಂದಿನ ದಾಖಲಾತಿಗಳಿಗಾಗಿ ತೆಗೆದಿಟ್ಟುಕೊಳ್ಳಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *