Headlines

ಪ್ರಧಾನಿ ಮೋದಿಯಿಂದ ಉದ್ಘಾಟನೆಗೂ ಮೊದಲೇ ರಾಜಸ್ಥಾನದ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ – Kannada News | Fire accident at refinery in Rajasthan day before inauguration by PM Narendra Modi

ನವದೆಹಲಿ, ಏಪ್ರಿಲ್ 20: ಪ್ರಧಾನಿ ಮೋದಿ (PM Modi) ಅವರು ರಾಜಸ್ಥಾನದ ಬಲೋತ್ರಾದಲ್ಲಿ ಭಾರತದ ಮೊದಲ ಸಮಗ್ರ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಆದರೆ, ಅದಕ್ಕೂ ಒಂದು ದಿನ ಮೊದಲು ಅಂದರೆ ಇಂದು ಈ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಭಾರತದ ಮೊದಲ ಗ್ರೀನ್‌ಫೀಲ್ಡ್ ಇಂಟಿಗ್ರೇಟೆಡ್ ರಿಫೈನರಿ-ಕಮ್-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಅನಾವರಣಗೊಳಿಸಲಿದ್ದಾರೆ. ಈ ಯೋಜನೆಯು 79,450 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯನ್ನು ಒಳಗೊಂಡಿದೆ. ಇದು ಈ ಪ್ರದೇಶದ ಅತಿದೊಡ್ಡ ಕೈಗಾರಿಕಾ ಅಭಿವೃದ್ಧಿಗಳಲ್ಲಿ ಒಂದಾಗಿದೆ.

ಮಾಹಿತಿಯ ಪ್ರಕಾರ, ಬೆಂಕಿ ಕೆಲವೇ ಕ್ಷಣಗಳಲ್ಲಿ ತೀವ್ರಗೊಂಡಿದ್ದು ಆ ಪ್ರದೇಶದಲ್ಲಿದ್ದ ಕಾರ್ಮಿಕರು ಮತ್ತು ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿತು. ಈ ಘಟನೆಯ ನಂತರ, ಅಗ್ನಿಶಾಮಕ ದಳದ ಸಿಬ್ಬಂದಿ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದರು. ಯಾವುದೇ ಗಾಯಗಳ ಬಗ್ಗೆ ವರದಿಗಳಾಗಿಲ್ಲ.

ಇದನ್ನೂ ಓದಿ: ಗಾಜಿಯಾಬಾದ್‌ನಲ್ಲಿ 150 ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ತೈಲ ಸಂಸ್ಕರಣಾಗಾರದ ಕಚ್ಚಾ ತೈಲ ಬಟ್ಟಿ ಇಳಿಸುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂಗಳವಾರ ಇಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಬೇಕಾಗಿತ್ತು. ಇದಕ್ಕೂ ಮುನ್ನ ಬೆಂಕಿ ಕಾಣಿಸಿಕೊಂಡಿರುವುದರಿಂದ ಘಟಕದೊಳಗೆ ಸಾಕಷ್ಟು ಅವ್ಯವಸ್ಥೆ ಉಂಟಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಈ ಸ್ಥಳವನ್ನು ಪರಿಶೀಲಿಸಲು ಸಂಸ್ಕರಣಾಗಾರಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: PM Modi Speech Today: ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ವಿಪಕ್ಷಗಳಿಗೆ ಪ್ರಧಾನಿ ಮೋದಿ ಚಾಟಿ

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ, ಅವರು ಬಲೋತ್ರಾದ ಪಚ್ಪದ್ರಾದಲ್ಲಿರುವ ಭಾರತದ ಮೊದಲ ಹೊಸ ಸಂಯೋಜಿತ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. 79,450 ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆಯೊಂದಿಗೆ ಈ ಹೆಗ್ಗುರುತು ಯೋಜನೆಯು ಭಾರತದ ಇಂಧನ ಮತ್ತು ಪೆಟ್ರೋಕೆಮಿಕಲ್ ವಲಯದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ 9 ಮಿಲಿಯನ್ ಟನ್ ವಾರ್ಷಿಕ ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ ಯೋಜನೆಯನ್ನು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮತ್ತು ರಾಜಸ್ಥಾನ ಸರ್ಕಾರದ ಜಂಟಿ ಉದ್ಯಮವಾಗಿ ಅಭಿವೃದ್ಧಿಪಡಿಸಲಾಗಿದೆ.

ಈ ಅತ್ಯಾಧುನಿಕ ಸ್ಥಾವರವು ತೈಲ ಸಂಸ್ಕರಣೆ ಮತ್ತು ಪೆಟ್ರೋಕೆಮಿಕಲ್ ಉತ್ಪಾದನೆಯನ್ನು ಸಂಯೋಜಿಸುತ್ತದೆ, ವರ್ಷಕ್ಕೆ 2.4 ಮಿಲಿಯನ್ ಟನ್ ಪೆಟ್ರೋಕೆಮಿಕಲ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಈ ಯೋಜನೆಯು ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವಲ್ಲಿ, ಪೆಟ್ರೋಕೆಮಿಕಲ್ ವಲಯದಲ್ಲಿ ಸ್ವಾವಲಂಬನೆಯನ್ನು ಹೆಚ್ಚಿಸುವಲ್ಲಿ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ವೇಗಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *