Headlines

ಹುಬ್ಬಳ್ಳಿಯಲ್ಲಿ ರೋಡ್ ರೋಮಿಯೋಗಳ ಅಟ್ಟಹಾಸ: ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು, ವಿಡಿಯೋ ವೈರಲ್ – Kannada News | Hubballi: Road Romeos Harass Women on Streets; CCTV Footage of Youths Touching Girl Improperly Goes Viral

ಹುಬ್ಬಳ್ಳಿ, ಏಪ್ರಿಲ್ 21: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ರಸ್ತೆಯಲ್ಲಿ ನಡೆದು ಹೋಗುವ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇತ್ತೀಚೆಗೆ ಪ್ಲೈಯಿಂಗ್ ಕಿಸ್ ನೀಡುವ ಮೂಲಕ ಸುದ್ದಿಯಾಗಿದ್ದ ರೋಡ್ ರೋಮಿಯೋಗಳು, ಈಗ ಒಂದು ಹೆಜ್ಜೆ ಮುಂದೆ ಹೋಗಿ ಹಾಡಹಗಲೇ ಯುವತಿಯರ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ.

ಸಿಸಿಟಿವಿಯಲ್ಲಿ ಸೆರೆಯಾಯ್ತು ಪುಂಡರ ಕೃತ್ಯ

ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ಇಂತಹದ್ದೇ ಒಂದು ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬಂದ ಮೂವರು ಯುವಕರು, ಯುವತಿಯ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ವೇಗವಾಗಿ ಪರಾರಿಯಾಗಿದ್ದಾರೆ. ಈ ಇಡೀ ಕೃತ್ಯವು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೊಲೀಸರ ಕಣ್ತಪ್ಪಿಸಿ ಓಡಾಟ

ಈ ಘಟನೆಯು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯಗಳು ಲಭ್ಯವಿದ್ದರೂ, ಕೃತ್ಯವೆಸಗಿದ ಕಾಮುಕರು ಇನ್ನೂ ಪತ್ತೆಯಾಗಿಲ್ಲ. ಸಾರ್ವಜನಿಕ ರಸ್ತೆಯಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಮಹಿಳೆಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರು ಕೂಡಲೇ ಇಂತಹ ಪುಂಡರನ್ನು ಮಟ್ಟಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *