Headlines

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ

ಬೆಂಗಳೂರು, ಡಿಸೆಂಬರ್ 30: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ನಾಳೆಯೂ ಸಹ ಇದೇ ರೀತಿಯ ವಾತಾವರಣವಿರಬಹುದೆಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 18°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *