ಇಂಡಿಯನ್ ಪ್ರೀಮಿಯರ್ ಲೀಗ್ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಎರಡೂ ತಂಡಗಳು ಕಳೆದ ಎರಡು ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮೊದಲಾರ್ಧವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಎಸ್ಜಿ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇನ್ನುಳಿದ 4 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ದಾಖಲಿಸಿದೆ. ಪ್ರಸ್ತುತ ತಂಡಗಳನ್ನು ಗಮನಿಸಿದರೆ ಉಭಯ ತಂಡಗಳು ಸಮಬಲದಿಂದ ಕೂಡಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.
ರಾಜಸ್ಥಾನ್ ರಾಯಲ್ಸ್ ತಂಡ: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್, ಕುಲದೀಪ್ ಸೇನ್.