Headlines

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ – Kannada News | Couple Dead Body Found In gangenahalli Home at Bengaluru

ಬೆಂಗಳೂರು, (ಏಪ್ರಿಲ್ 22): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ (Couple) ಶವ ಪತ್ತೆಯಾಗಿದೆ. 10 ವರ್ಷಗಳ ಹಿಂದೆ ವಿವಾಹವಾಗಿದ್ದ ಸುಮಿತ್ರಾ ಹಾಗೂ ಡೇವಿಡ್ ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ. ಆದ್ರೆ, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದುಬಂದಿದ್ದಲ್ಲ. ಇನ್ನು ಸ್ಥಳಕ್ಕೆ ಆರ್​​ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಪತಿ ಡೇವಿಡ್, ಉಸಿರುಗಟ್ಟಿಸಿ ಕೊಂದು ಬಳಿಕ ಸೀರೆಯಿಂದ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಪತಿ ಡೇವಿಡ್ ಕೈಗಳ ಮೇಲೆ ಪ್ರತಿರೋಧವೊಡ್ಡಿ ತರಚಿರುವ ಗುರುತು ಸಹ ಕಂಡುಬಂದಿದೆ.  ಹೀಗಾಗಿ ಡೇವಿಡನೇ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!

ಇನ್ನು ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು, ಬಳಿಕ ಪ್ರತಿಕ್ರಿಯಿಸಿರುವ ಅವರು, ಸಂಬಂಧಿಕರ ಮಾಹಿತಿ ಪ್ರಕಾರ ಕೌಟುಂಬಿಕ ಕಲಹ ಇತ್ತು. ಜಗಳವಾಡಿದ್ದರಿಂದ ಮಕ್ಕಳನ್ನು ಸೋದರ ಸಂಬಂಧಿ ಕರೆದೊಯ್ದಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಇಬ್ಬರ ಶವ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಮೇಲ್ನೋಟಕ್ಕೆ ಕೌಟುಂಬಿಕ ಕಲಹ ಎನ್ನಲಾಗುತ್ತಿದೆಯಾರೂ ಮರಣೋತ್ತರ ಪರೀಕ್ಷೆ ವರದಿ ಹಾಗೂ ಪೊಲೀಸರ ತನಿಖೆ ಬಳಿಕ ಸಾವಿನ ರಹಸ್ಯ ಬಯಲಿಗೆ ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *