ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ ತಂಡ 20 ಓವರ್ಗಳಲ್ಲಿ 207 ರನ್ ಕಲೆಹಾಕಿತು. ತಂಡ ಇಷ್ಟು ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಹಾಗೆಯೇ ಸಂಜು ಅವರ ಐಪಿಎಲ್ ವೃತ್ತಿಜೀವನದ ಐದನೇ ಶತಕವೂ ಆಗಿದ್ದು, ಈ ಮೂಲಕ ಸಂಜು ಐಪಿಎಲ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನಕ್ಕೇರಿದ್ದಾರೆ.