ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ (RCB vs GT) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕೊನೆಯ ಲೀಗ್ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ಈ ಪಂದ್ಯ ಆರ್ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳನ್ನು ಆಡಲಿದ್ದು, ಎರಡನೇ ತವರು ಮೈದಾನದ ರಾಯ್ಪುರದಲ್ಲಿ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಹಾಗಾಗಿ ಬೆಂಗಳೂರಿನಲ್ಲಿ ಆರ್ಸಿಬಿಗೆ ಇಂದಿನ ಪಂದ್ಯ ಕೊನೆಯ ಲೀಗ್ ಪಂದ್ಯವಾಗಿದೆ.
ಟಾಸ್ ಗೆದ್ದ ಆರ್ಸಿಬಿ
ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಗುಜರಾತ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಆರ್ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ಅದರಂತೆ ಇಂಜುರಿಗೊಂಡಿರುವ ಫಿಲ್ ಸಾಲ್ಟ್ ಬದಲಿಗೆ ಜೆಕೋಬ್ ಬೆಥಲ್ ಆಡಲಿದ್ದಾರೆ. ಇತ್ತ ಗುಜರಾತ್ ಟೈಟಾನ್ಸ್ ತಂಡದಲ್ಲೂ ಬದಲಾವಣೆಯಾಗಿದೆ.
ಮುಖಾಮುಖಿ ದಾಖಲೆ
ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಇಲ್ಲಿಯವರೆಗೆ ಆರು ಪಂದ್ಯಗಳನ್ನು ಆಡಿವೆ. ಈ ಆರು ಪಂದ್ಯಗಳಲ್ಲಿ ಎರಡೂ ತಂಡಗಳು ಸಮಬಲದ ಹೋರಾಟ ನೀಡಿವೆ. ಏಕೆಂದರೆ ಆರು ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಮೂರು ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಈ ಎರಡೂ ತಂಡಗಳ ನಡುವೆ ಸಮಾನ ಪೈಪೋಟಿ ಇದೆ. ಐಪಿಎಲ್ 2025 ಟೂರ್ನಮೆಂಟ್ನಲ್ಲಿ ಎರಡೂ ತಂಡಗಳು ಒಮ್ಮೆ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಗುಜರಾತ್ ಟೈಟಾನ್ಸ್ 8 ವಿಕೆಟ್ಗಳಿಂದ ಗೆದ್ದುಕೊಂಡಿತ್ತು.
ಪಾಯಿಂಟ್ ಪಟ್ಟಿಯಲ್ಲಿ ಪ್ರಸ್ತುತ ಸ್ಥಾನ
ಉಭಯ ತಂಡಗಳು ಈ ಆವೃತ್ತಿಯಲ್ಲಿ ತಮ್ಮ ಏಳನೇ ಪಂದ್ಯವನ್ನು ಆಡುತ್ತಿವೆ. ಎರಡೂ ತಂಡಗಳು ಇಲ್ಲಿಯವರೆಗೆ ಆರು ಪಂದ್ಯಗಳನ್ನು ಆಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ 8 ಅಂಕ ಮತ್ತು +1.171 ನೆಟ್ ರನ್ರೇಟ್ನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತ ಗುಜರಾತ್ ಟೈಟಾನ್ಸ್ 6 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದ್ದು, 6 ಅಂಕಗಳನ್ನು ಮತ್ತು -0.821 ನೆಟ್ ರನ್ರೇಟ್ನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಈಗ ಎರಡೂ ತಂಡಗಳು ಮುಖಾಮುಖಿಯಾಗಲಿದ್ದು, ಪಾಯಿಂಟ್ ಟೇಬಲ್ ಅನ್ನು ಬದಲಾಯಿಸುವ ಅವಕಾಶವಿದೆ.
ಉಭಯ ತಂಡಗಳ ಪ್ಲೇಯಿಂಗ್ 11
ಆರ್ಸಿಬಿ: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್, ಸುಯಾಶ್ ಶರ್ಮಾ, ರಸಿಖ್ ಸಲಾಂ.
ಇಂಪ್ಯಾಕ್ಟ್ ಪ್ಲೇಯರ್: ಜಾಕೋಬ್ ಬೆಥೆಲ್, ಜೋರ್ಡಾನ್ ಕಾಕ್ಸ್, ಮಂಗೇಶ್ ಯಾದವ್, ವಿಕಿ ಓಸ್ಟ್ವಾಲ್ ಮತ್ತು ವೆಂಕಟೇಶ್ ಅಯ್ಯರ್.
ಗುಜರಾತ್: ಶುಭಮನ್ ಗಿಲ್(ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಮಾನವ್ ಸುತಾರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್.
ಇಂಪ್ಯಾಕ್ಟ್ ಪ್ಲೇಯರ್: ಪ್ರಸಿದ್ಧ್ ಕೃಷ್ಣ, ಅನುಜ್ ರಾವತ್, ಗ್ಲೆನ್ ಫಿಲಿಪ್ಸ್, ನಿಶಾಂತ್ ಸಿಂಧು ಮತ್ತು ಅರ್ಷದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 7:08 pm, Fri, 24 April 26