ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ವಿವರಿಸಿದ್ದಾರೆ.