ಐಪಿಎಲ್ 2026 (IPL 2026) ರ 37 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ತವರಿನಲ್ಲಿ ಟಾಸ್ ಸೋತ ಸಿಎಸ್ಕೆ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ತವರು ಮೈದಾನವಾಗಿದ್ದರಿಂದ ಸಿಎಸ್ಕೆ ಉತ್ತಮ ಆರಂಭ ಪಡೆಯುವ ನಿರೀಕ್ಷೆ ಇತ್ತು. ಆದರೆ ಗುಜರಾತ್ನ ಸಾಂಘಿಕ ದಾಳಿಗೆ ತತ್ತರಿಸಿದ ಸಿಎಸ್ಕೆ ಬ್ಯಾಟಿಂಗ್ ವಿಭಾಗ ಪವರ್ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿತು. ಪರಿಣಾಮವಾಗಿ, ತಂಡವು ಪಂದ್ಯದ ಆರಂಭದಲ್ಲಿಯೇ ಅಂದರೆ 4 ಓವರ್ಗಳ ಒಳಗೆಯೇ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಬಳಸಬೇಕಾಯಿತು.
8 ಎಸೆತಗಳಲ್ಲಿ 3 ವಿಕೆಟ್
ಎಂದಿನಂತೆ ಸಿಎಸ್ಕೆ ತಂಡ ಉತ್ತಮ ಆರಂಭ ಪಡೆಯುವಲ್ಲಿ ಮತ್ತೊಮ್ಮೆ ಎಡವಿತು. ಫಾರ್ಮ್ನಲ್ಲಿರುವ ಸಂಜು ಸ್ಯಾಮ್ಸನ್ ಕೇವಲ 15 ಎಸೆತಗಳಲ್ಲಿ 11 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಓವರ್ನಲ್ಲಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಅದೇ ಓವರ್ನ ಕೊನೆಯ ಎಸೆತದಲ್ಲಿ ಉರ್ವಿಲ್ ಪಟೇಲ್ ಕೂಡ ರಬಾಡಗೆ ಬಲಿಯಾದರು. ಹೀಗಾಗಿ ಸಿಎಸ್ಕೆ ಒಂದೇ ಓವರ್ನಲ್ಲಿ ಎರಡು ವಿಕೆಟ್ ಕಳೆದುಕೊಂಡಿತು. ಹೀಗಾಗಿ ಸಿಎಸ್ಕೆ ಐದನೇ ಓವರ್ನಲ್ಲಿಯೇ ಇಂಪ್ಯಾಕ್ಟ್ ಪ್ಲೇಯರ್ ಆಗಿ ಉರ್ವಿಲ್ ಪಟೇಲ್ ಅವರನ್ನು ಕಣಕ್ಕಿಳಿಸಬೇಕಾಯಿತು.
ಪರಿಣಾಮಕಾರಿಯಾಗದ ಇಂಪ್ಯಾಕ್ಟ್ ಪ್ಲೇಯರ್
ಆದರೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಉರ್ವಿಲ್ ಪಟೇಲ್ ಕೂಡ ತಂಡಕ್ಕೆ ನೆರವಾಗಲಿಲ್ಲ. ಸಿರಾಜ್ ಬೌಲ್ ಮಾಡಿದ ಐದನೇ ಓವರ್ನಲ್ಲಿ ಸರ್ಫರಾಜ್ ಖಾನ್ ಶೂನ್ಯಕ್ಕೆ ಔಟಾದರು. ಹೀಗಾಗಿ, ಸಿಎಸ್ಕೆ ಕೇವಲ 8 ಎಸೆತಗಳಲ್ಲಿ ತನ್ನ ಮೊದಲ ಮೂರು ವಿಕೆಟ್ಗಳನ್ನು ಕಳೆದುಕೊಂಡಿತು. ಹೀಗಾಗಿ ಶೂನ್ಯಕ್ಕೆ ಔಟಾದ ಸರ್ಫರಾಜ್ ಬದಲಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಉರ್ವಿಲ್ ಪಟೇಲ್ ಅವರನ್ನು ಸಿಎಸ್ಕೆ ಬ್ಯಾಟಿಂಗ್ಗೆ ಇಳಿಸಿತು. ಗಮನಿಸಬೇಕಾದ ಸಂಗತಿಯೆಂದರೆ, ಸಿಎಸ್ಕೆ ಇಂಪ್ಯಾಕ್ಟ್ ಪ್ಲೇಯರ್ ಅನ್ನು ಇಷ್ಟು ಬೇಗ ಕಣಕ್ಕಿಳಿಸಿದ್ದು, ಈ ಆವೃತ್ತಿಯಲ್ಲಿ ಇದು ಎರಡನೇ ಬಾರಿ.
CSK vs GT IPL 2026 Live Score: ಗುಜರಾತ್ಗೆ 159 ರನ್ ಗುರಿ
ಇದಕ್ಕೂ ಮೊದಲು, ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ಬದಲಿಗೆ ಸರ್ಫರಾಜ್ ಖಾನ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಲಾಗಿತ್ತು. ಆಗಲೂ ತಂಡವು ನಾಲ್ಕನೇ ಓವರ್ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಅನ್ನು ಕಣಕ್ಕಿಳಿಸಿತ್ತು. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ಆ ಪಂದ್ಯವನ್ನು ಸೋತಿತ್ತು. ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ ಉರ್ವಿಲ್ ಪಟೇಲ್ ಕೂಡ ಯಾವುದೇ ಪರಿಣಾಮ ಬೀರದೆ ಪೆವಿಲಿಯನ್ ಸೇರಿಕೊಂಡರು. ಉರ್ವಿಲ್ ಪಟೇಲ್ 3 ಎಸೆತಗಳಲ್ಲಿ ಒಂದು ಬೌಂಡರಿ ಸಹಿತ 4 ರನ್ ಗಳಿಸಲಷ್ಟೇ ಶಕ್ತರಾಗಿ ವಿಕೆಟ್ ಒಪ್ಪಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ