ದಾವಣಗೆರೆ, ಏಪ್ರಿಲ್ 26: ಪಂಚಮಸಾಲಿ ಗುರುಪೀಠ ಟ್ರಸ್ಟ್ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಮತ್ತು ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಅವರನ್ನು ಟ್ರಸ್ಟ್ನಿಂದ ಉಚ್ಚಾಟನೆ ಮಾಡಲಾಗಿದೆ. ಲೆಕ್ಕಪತ್ರ ನೀಡುವಂತೆ ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಕೇಳಲಾಗಿದ್ದರೂ ಸಹ, ಅವರು ಸ್ಪಂದಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 13ರಿಂದ ಈ ಮೂವರು ಟ್ರಸ್ಟಿಗಳಿಗೆ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್ ಹೇಳಿದ್ದಾರೆ.
ಸಂಘವು ಸುಪ್ರೀಂ ಆಗಿದ್ದು, ಸುಮಾರು 13,600 ಸದಸ್ಯರನ್ನು ಹೊಂದಿದೆ. ಟ್ರಸ್ಟ್ನಲ್ಲಿನ ಅವ್ಯವಹಾರ ತಡೆಯುವ ಮತ್ತು ಸಮಾಜದ ಒಳಿತಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂನ್ ತಿಂಗಳಲ್ಲಿ ಲೆಕ್ಕ ಕೊಡಿ ಅಭಿಯಾನ ಸಮಿತಿ ಅಧ್ಯಕ್ಷರೊಂದಿಗೆ ರಾಜ್ಯ ಪ್ರವಾಸ ಕೈಗೊಂಡು 2008ರಿಂದ ಮಠಕ್ಕೆ ದಾನ ನೀಡಿದವರ ಕುರಿತು ಮಾಹಿತಿ ಸಂಗ್ರಹಿಸಿ, ಜೂನ್ನಲ್ಲಿ ಪೂರ್ಣ ಮಾಹಿತಿ ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.