ಐಪಿಎಲ್ 2026ರ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿದೆ. ಈ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಆತಿಥೇಯ ಆರ್ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿ ಆರ್ಸಿಬಿಗೆ ಸೇಡಿನ ಸಮರವಾಗಿದೆ. ಇದಕ್ಕೆ ಪೂರಕವಾಗಿ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿರುವ ಆರ್ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿರುವ ಡೆಲ್ಲಿ ತಂಡವನ್ನು ಮಣಿಸಲು ಸಜ್ಜಾಗಿದೆ.