ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಕೇವಲ 8 ರನ್ಗಳಿಗೆ ಪ್ರಮುಖ 6 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರ್ಸಿಬಿ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಹೇಜಲ್ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಡೆಲ್ಲಿ ತಂಡ ಪವರ್ಪ್ಲೇನಲ್ಲಿ ಅಂದರೆ ಮೊದಲ 6 ಓವರ್ಗಳಲ್ಲಿ ಕೇವಲ 13 ರನ್ ಕಲೆಹಾಕಿ ಬರೋಬ್ಬರಿ 6 ವಿಕೆಟ್ಗಳನ್ನು ಕಳೆದುಕೊಂಡಿದೆ.