ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಒಂದು ರೂಪಾಯಿಯೂ ಇಲ್ಲ, ಪಿಡಿಓಗಳು ಲಭ್ಯರಿಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಂದು ಅವರು ವಿವರಿಸಿದರು. ಮಾಲಿಕಲ್ ಮಳೆಯಿಂದ ದ್ರಾಕ್ಷಿ, ಬಾಳೆ ಮತ್ತು ಮಾವು ಬೆಳೆಗಳು ನಾಶವಾಗಿದ್ದರೂ, ಯಾರೊಬ್ಬರೂ ಮುಖ್ಯಮಂತ್ರಿಗಳ ಬಳಿ ಪರಿಹಾರ ಕೇಳಿಲ್ಲ ಎಂದು ಕುಮಾರಸ್ವಾಮಿ ದೂರಿದರು. ಜನಪ್ರತಿನಿಧಿಗಳು ಜನರ ಕಷ್ಟಗಳ ಬಗ್ಗೆ ಚಿಂತಿಸದೆ, ಅಧಿಕಾರದ ಹಿಂದೆ ಓಡುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ