ಡಾ ರಾಜ್ಕುಮಾರ್ (Dr Rajkumar) ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಒಮ್ಮೆ ಕ್ಷಮಾಪಣೆ ಕೇಳಿ ಮತ್ತೆ ಹಳೆ ವರಸೆ ಮುಂದುವರೆಸಿರುವ ಚೇತನ್ ಅಹಿಂಸ ವಿರುದ್ಧ ಹಲವು ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು, ಅಭಿಮಾನಿ ಸಂಘಗಳ ಸದಸ್ಯರು ಫಿಲಂ ಚೇಂಬರ್ ಎದುರು ಪ್ರತಿಭಟನೆ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರಿಗೆ ದೂರು ಸಹ ನೀಡಿದ್ದಾರೆ. ಇದೀಗ ಜಯಾಮಾಲಾ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಾಕಿಸ್ತಾನಕ್ಕೆ ಜಯಕಾರ ಹಾಕಿರುವ ಚೇತನ್, ಭಾರತೀಯನೇ ಅಲ್ಲ’ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ