ಬೆಂಗಳೂರು, ಏಪ್ರಿಲ್ 29: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ ಮಾಫಿಯಾದ (Drugs Mafia) ಬೆನ್ನೆಲುಬು ಮುರಿಯಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ ಒಂದು ವಾರದಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಧ ವಿಭಾಗಗಳ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಅಕ್ರಮ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗಳ ವಿವರ
- ಬಾಗಲೂರು ಪೊಲೀಸರು ಸುಮಾರು 16 ಕೋಟಿ ರೂಪಾಯಿ ಮೌಲ್ಯದ ಎಲ್‌ಎಸ್‌ಡಿ (LSD) ಸ್ಟ್ರಿಪ್‌ಗಳನ್ನು ಜಪ್ತಿ ಮಾಡಿದ್ದಾರೆ.
- ಸಿಸಿಬಿ ಪೊಲೀಸರು ನಡೆಸಿದ ದಾಳಿಯಲ್ಲಿ 17.5 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಪತ್ತೆಯಾಗಿದೆ.
- ಆಡುಗೋಡಿ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ 1.5 ಕೋಟಿ ರೂಪಾಯಿ ಬೆಲೆಯ ಬ್ರೌನ್ ಶುಗರ್ ವಶಪಡಿಸಿಕೊಂಡಿದ್ದಾರೆ.
- ಯಶವಂತಪುರ ಮತ್ತು ಜಾಲಹಳ್ಳಿ ಭಾಗಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ 6.47 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.
- ಚಿಕ್ಕಜಾಲ ಪೊಲೀಸರು 1.6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಜಪ್ತಿ ಮಾಡಿದ್ದಾರೆ.
ನಗರದ ಯುವಜನತೆಯನ್ನು ಗುರಿಯಾಗಿಸಿಕೊಂಡು ಸರಬರಾಜು ಮಾಡಲಾಗುತ್ತಿದ್ದ ಈ ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಡ್ರಗ್ಸ್ ಜಾಲಕ್ಕೆ ದೊಡ್ಡ ಏಟು ನೀಡಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ