ನೆಲಮಂಗಲ, ಮೇ 1: ಇಂದಿನಿಂದ (ಮೇ 1) ಸತತ ಮೂರು ದಿನಗಳ ರಜೆ ಇರುವುದರಿಂದ ಬೆಂಗಳೂರಿಗರು ತಮ್ಮ ಊರುಗಳತ್ತ ಮತ್ತು ಪ್ರವಾಸಿ ತಾಣಗಳತ್ತ ತೆರಳುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಹೊರಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಕ್ರವಾರ ಬೆಳಗ್ಗೆ ವಾಹನಗಳ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದ್ದು, ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಗಿದೆ. ಅದರಲ್ಲೂ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಿಲೋಮೀಟರ್ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಅತ್ಯಂತ ನಿಧಾನಗತಿಯಲ್ಲಿ ಚಲಿಸುತ್ತಿವೆ. ನೆಲಮಂಗಲ ಟೋಲ್ ಬಳಿ ವಾಹನಗಳು ಸಾಲುಗಟ್ಟಿರುವ ಚಾಚಿಕೊಂಡಿದ್ದು, ಸಂಚಾರ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿರುವುದು ಕಂಡುಬಂತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ