ಬೆಂಗಳೂರು, ಮೇ 01: ನಗರದಲ್ಲಿ ಇಂದು ಸುರಿದ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಗೊಟ್ಟಿಗೆರೆ, ಪುಟ್ಟೇನಹಳ್ಳಿ, ಬನ್ನೇರುಘಟ್ಟ ರಸ್ತೆ ಮತ್ತು ಬಿಕೆ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳು ತೀವ್ರವಾಗಿ ಜಲಾವೃತಗೊಂಡಿವೆ. ರಸ್ತೆಗಳೆಲ್ಲಾ ಕೆರೆಯಂತಾಗಿ ಪರಿವರ್ತನೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬನ್ನೇರುಘಟ್ಟ ರಸ್ತೆಯಂತಹ ಪ್ರಮುಖ ಮಾರ್ಗಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ದೈನಂದಿನ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಕೆ.ಆರ್. ಸರ್ಕಲ್ ಅಂಡರ್ಪಾಸ್ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.