ಐಪಿಎಲ್ 2026 ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್ಕೆ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲಿ ಮುಂಬೈ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಯಿತು. ಸಿಎಸ್ಕೆ ವಿರುದ್ಧದ ಈ ಪಂದ್ಯದಲ್ಲಿ ಹೀನಾಯವಾಗಿ ಸೋತ ಮುಂಬೈ ಈ ಆವೃತ್ತಿಯಲ್ಲಿ 7ನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇತ್ತ ಈ ಆವೃತ್ತಿಯಲ್ಲಿ 4ನೇ ಗೆಲುವು ದಾಖಲಿಸಿದ ಸಿಎಸ್ಕೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿತು. ಈ ಸೋಲಿನೊಂದಿಗೆ ಮುಂಬೈ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸುವುದು ಭಾಗಶಃ ಖಚಿತವಾದ್ದಂತ್ತಾಗಿದೆ.