ಪುಣೆ, ಮೇ 03: ಪುಣೆ ಜಿಲ್ಲೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪದ ಮೇಲೆ ಬಂಧಿತನಾಗಿರುವ 65 ವರ್ಷದ ವ್ಯಕ್ತಿಯ ಕರಾಳ ಮುಖ ಈಗ ಬೆಳಕಿಗೆ ಬಂದಿದೆ. ಈತ ಕೇವಲ ಆಕಸ್ಮಿಕವಾಗಿ ಅಪರಾಧವೆಸಗಿದ್ದಲ್ಲ, ಬದಲಿಗೆ ದಶಕಗಳಿಂದ ಲೈಂಗಿಕ ಅಪರಾಧಗಳಲ್ಲಿ ತೊಡಗಿದ್ದವನು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
1998ರಲ್ಲಿ ಆರೋಪಿಯ ವಿರುದ್ಧ ಮೊದಲ ಬಾರಿಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು, 2015ರಲ್ಲಿ ಲೈಂಗಿಕ ಕಿರುಕುಳ ಮತ್ತು ಕೊಲೆಯತ್ನದ ಮತ್ತೊಂದು ಪ್ರಕರಣ ದಾಖಲಾಗಿತ್ತು. 2015 ರಲ್ಲಿ ಪಕ್ಕದ ಮನೆ ಹುಡುಗಿಯ ಮೇಲೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಪೋಕ್ಸೊ (POCSO) ಕಾಯ್ದೆಯಡಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 1998 ಮತ್ತು 2015ರ ಎರಡೂ ಪ್ರಕರಣಗಳಲ್ಲಿ ಈತ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದನು. 2019 ರಲ್ಲಿ ನ್ಯಾಯಾಲಯವು ಈತನನ್ನು ಮುಕ್ತಗೊಳಿಸಿತ್ತು, ಇದು ಈತನ ಕ್ರೂರ ಪ್ರವೃತ್ತಿ ಮುಂದುವರೆಯಲು ಕಾರಣವಾಯಿತು.
The accused has a prior history of sexually harassing two women and has already served a prison sentence for one of those crimes. He lured a three year old child away under the pretext of showing them a calf.the innocent child followed him, jumping with joy. The monster then… https://t.co/cWCtfBvt11 pic.twitter.com/3jMETYuKsf
— Shraddha (슈라다) (@HuhVsWorld) May 2, 2026
ಬಾಲಕಿ ನಾಪತ್ತೆಯಾದ ನಂತರ ಕುಟುಂಬದವರು ಹುಡುಕಾಟ ಆರಂಭಿಸಿದಾಗ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. 36 ಸೆಕೆಂಡುಗಳ ಈ ವೀಡಿಯೊದಲ್ಲಿ, ಆರೋಪಿಯು ಮಗುವಿಗೆ ಆಮಿಷವೊಡ್ಡಿ ಗಲ್ಲಿಯೊಂದಕ್ಕೆ ಕರೆದೊಯ್ಯುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಈ ಸಾಕ್ಷ್ಯದ ಆಧಾರದ ಮೇಲೆ ಪುಣೆ ಗ್ರಾಮೀಣ ಪೊಲೀಸರು ಮಾಹಿತಿ ಬಂದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ.
ಮತ್ತಷ್ಟು ಓದಿ: ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!
ಮಹಾರಾಷ್ಟ್ರ ಸರ್ಕಾರವು ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದೆ. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಆರೋಪಿಯನ್ನು ಗಲ್ಲಿಗೇರಿಸಲು ಅಗತ್ಯವಿರುವ ಭದ್ರವಾದ ಪುರಾವೆಗಳನ್ನು ಸಂಗ್ರಹಿಸುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಪ್ರಕರಣದ ವಿಚಾರಣೆಯನ್ನು ತ್ವರಿತ ನ್ಯಾಯಾಲಯದಲ್ಲಿ (Fast-track Court) ನಡೆಸುವಂತೆ ಆದೇಶಿಸಲಾಗಿದೆ. ಪ್ರಸ್ತುತ, ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮೇ 7 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ