ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 46ನೇ ಪಂದ್ಯದಲ್ಲಿ ಗುಜರಾತ್ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ತಂಡವನ್ನು ಕೊನೆಯ ಓವರ್ನಲ್ಲಿ ಸೋಲಿಸಿದ ಗುಜರಾತ್ ಹ್ಯಾಟ್ರಿಕ್ ಗೆಲುವು ದಾಖಲಿಸಿತು. ಇತ್ತ ಪಂಜಾಬ್ ಈ ಆವೃತ್ತಿಯಲ್ಲಿ ತನ್ನ ಎರಡನೇ ಸೋಲನ್ನು ಎದುರಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 163 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 20ನೇ ಓವರ್ನ 5ನೇ ಎಸೆತದಲ್ಲಿ ವಾಷಿಂಗ್ಟನ್ ಸುಂದರ್ ಬಾರಿಸಿದ ಸಿಕ್ಸರ್ ಮೂಲಕ ಗೆಲುವಿನ ದಡ ಮುಟ್ಟಿತು.