Headlines

ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ – Kannada News | Peenya Elevated Flyover Closed from Today for 4 Days: Check Alternative Routes and Traffic Advisory

ಪೀಣ್ಯ ಫ್ಲೈಓವರ್ (ಸಂಗ್ರಹ ಚಿತ್ರ)Image Credit source: tv9

ಬೆಂಗಳೂರು, ಮೇ 5: ನೀವು ಇಂದು ತುಮಕೂರು ರಸ್ತೆ ಅಥವಾ ಪೀಣ್ಯ ಮಾರ್ಗವಾಗಿ ಸಂಚರಿಸುತ್ತಿದ್ದೀರಾ? ಹಾಗಿದ್ದಲ್ಲಿ ಈ ಸುದ್ದಿ ಗಮನಿಸಿ. ಈ ಹಿಂದೆ ಘೋಷಿಸಿದಂತೆ, ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover) ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಇಂದಿನಿಂದ (ಮೇ 5) ಅನ್ವಯವಾಗುವಂತೆ ಮುಂದಿನ 4 ದಿನಗಳ ಕಾಲ ಫ್ಲೈಓವರ್ ಮೇಲೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಮೇ 5ರ ಬೆಳಗ್ಗೆ 5 ಗಂಟೆಯಿಂದ ಮೇ 8ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಬಂದ್ ಮಾಡುತ್ತಿದೆ. ಈ ಅವಧಿಯಲ್ಲಿ ಫ್ಲೈಓವರ್‌ನ ಎರಡೂ ಬದಿಗಳಲ್ಲಿ ಸಂಚಾರ ಇರುವುದಿಲ್ಲ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸವಾರರು ಸಹಕರಿಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ವಿನಂತಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸ್ ಎಕ್ಸ್ ಸಂದೇಶ

ಪರ್ಯಾಯ ಮಾರ್ಗಗಗಳ ವಿವರ ಇಲ್ಲಿದೆ

ನೆಲಮಂಗಲದಿಂದ ಬೆಂಗಳೂರು ನಗರದ ಕಡೆಗೆ ಬರುವವರು: ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಫ್ಲೈಓವರ್ ಕೆಳಭಾಗದ ಎನ್.ಹೆಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್.ಆರ್.ಎಸ್ ಜಂಕ್ಷನ್ ಮಾರ್ಗವಾಗಿ ಗೊರಗುಂಟೆಪಾಳ್ಯ ಅಥವಾ ಜಾಲಹಳ್ಳಿ ಕ್ರಾಸ್ ತಲುಪಬಹುದು.

ಸಿ.ಎಂ.ಟಿ.ಐ ನಿಂದ ನೆಲಮಂಗಲ ಕಡೆಗೆ ಹೋಗುವವರು: ಫ್ಲೈಓವರ್ ಕೆಳಭಾಗದ ಸರ್ವಿಸ್ ರಸ್ತೆ ಮೂಲಕ ಎಸ್.ಆರ್.ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ ಹಾಗೂ 8ನೇ ಮೈಲಿ ದಾಟಿ ನೆಲಮಂಗಲ ಟೋಲ್ ಕಡೆಗೆ ಸಾಗಬಹುದು.

ಇದನ್ನೂ ಓದಿ: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್​​: ಬದಲಿ ಮಾರ್ಗದ ಮಾಹಿತಿ ಇಲ್ಲಿದೆ

ಈ ಹಿಂದೆ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಈ ಪ್ರಕ್ರಿಯೆಯು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿತ್ತು. ಇದೀಗ ಇಂದಿನಿಂದ ಕಾಮಗಾರಿ ಆರಂಭವಾಗುತ್ತಿರುವುದರಿಂದ ಸರ್ವಿಸ್ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸವಾರರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪ್ರಯಾಣ ಬೆಳೆಸುವುದು ಸೂಕ್ತ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *