ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್ನಲ್ಲಿದ್ದು, ಇಂದಿನ ಮ್ಯಾಚ್ನಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದೆ.
ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ 20 ಬಾರಿ ಗೆದ್ದಿದೆ. ಇನ್ನು 12 ಮ್ಯಾಚ್ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿದೆ. ಅಂದರೆ ಅಂಕಿ ಅಂಶಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಹೊಂದಿದೆ. ಆದರೆ ಪ್ರಸ್ತುತ ಫಾರ್ಮ್ ಗಮನಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.