ಮೈಸೂರು, (ಮೇ,7): ಕರ್ನಾಟಕದ ಹಿರಿಯ ರಾಜಕಾರಣಿ, ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ (H Vishwanath) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ಸಕ್ರೀಯ ರಾಜಕಾರಣದಲ್ಲಿ ಇರುತ್ತಾರೆ. ಆದ್ರೆ,ಇನ್ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚುನಾವಣೆಗೆ ಸ್ಪರ್ಧಿಸಿದಾಗ ಜನರೇ ಹಣ ನೀಡಿ ಆಶೀರ್ವದಿಸಿದ್ದರು ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು 50 ಕೋಟಿ ರೂಪಾಯಿ ಹಣ ಬೇಕು. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ನನಗಿಲ್ಲ. ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜಕೀಯದಲ್ಲಿ ಮುಂದುವರಿಯುತ್ತೇನೆ. ಆದರೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ