Headlines

ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ – Kannada News | Bengaluru Traffic Alert: PM Modi Visit May 10; Check Route Changes and Restrictions

ಬೆಂಗಳೂರು, ಮೇ 09: ನಾಳೆ (ಮೇ 10) ಬೆಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ನರೇಂದ್ರ ಮೋದಿಯವರು ಭಾಗಿಯಾಗಲಿರುವ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಾರ ನಿರ್ಬಂಧಿತ ಪ್ರದೇಶಗಳು

  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿ.ಜಿ.ಸಿ.ಎ ಕಚೇರಿವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)
  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30ರ ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)

ಇದನ್ನೂ ಓದಿ: ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ; ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ

ವಾಹನ ನಿಲುಗಡೆ ನಿರ್ಬಂಧಿಸಿರುವ ರಸ್ತೆಗಳು

  • ​ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್.ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ
  • ​HAL ವಿಮಾನ ನಿಲ್ದಾಣ ಗೇಟ್ ನಂ. 30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ
  • HAL ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ DGCA ಕಚೇರಿವರೆಗೆ

ಪಾರ್ಕಿಂಗ್ ಸ್ಥಳಗಳು

  • HAL ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್).
  • ಸಾರ್ವಜನಿಕರಿಗೆ- ಸರ್ ಎಸ್.ಎಂ.ವಿ, ಕಾಲೇಜು ಮೈದಾನ, HAL ಬಸ್ ಯಾರ್ಡ್

ಬೆಳಗ್ಗೆ 9 ರಿಂದ ಮಧ್ಯಾಹ್ನ 3ರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗವಾಗಿ ಬರುವವರಿಗೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಪರ್ಯಾಯ ಮಾರ್ಗ

ತುಮಕೂರು ರಸ್ತೆಯಿಂದ ಕನಕಪುರ ರಸ್ತೆ: ತುಮಕೂರು ರಸ್ತೆಯಿಂದ ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವ ವಾಹನ ಸವಾರರು ಸಿಎಂಟಿಐ ಜಂಕ್ಷನ್​​ ಬಳಿ ಬಲ ತಿರುವು ಪಡೆದು ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು. ತುಮಕೂರು ರಸ್ತೆಯಲ್ಲಿ ನಗರದ ಒಳಭಾಗದಿಂದ ಬಂದು ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವವರಿಗೂ ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕವೇ ತೆರಳಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *