ಚಿತ್ರದುರ್ಗ, ಮೇ 09: ಕರ್ನಾಟಕದಲ್ಲಿ ಮುಂದೆ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ನಡೆದ ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 21ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದರು. ರೈತರಿಗೆ ನ್ಯಾಯ ಒದಗಿಸಿದ ರಾಜಾಹುಲಿ ಯಾರಾದರೂ ಇದ್ದರೆ ಅದು ಯಡಿಯೂರಪ್ಪ. ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪರವರಿಗೆ ಶುಭಾಶಯ ಕೋರಿ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು. ಇನ್ನು ಇಂದಿನ ಹೋರಾಟ ಸಾಮಾಜಿಕ ಜಾಲತಾಣಕ್ಕೆ ಸೀಮಿತ ಆಗಿದೆ. ಆದರೆ ಹೋರಾಟಕ್ಕೆ ಹೊಸ ಪರಿಕಲ್ಪನೆ ಕೊಟ್ಟಿದ್ದು ಬಿಎಸ್ ಯಡಿಯೂರಪ್ಪ ಅವರು. ನಾವೆಲ್ಲಾ ಅವರಿಂದ ಪ್ರೇರಣೆ ಪಡೆಯಬೇಕು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.