ಕೋಟ್ಯಾಂತರ ಆರ್ಸಿಬಿ ಅಭಿಮಾನಿಗಳ ಹೃದಯ ಬಡಿತವನ್ನು ಹೆಚ್ಚಿಸಿದ್ದ ಐಪಿಎಲ್ 2026 ರ 54ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 20ನೇ ಓವರ್ನ ಕೊನೆಯ ಎಸೆತದಲ್ಲಿ ಮಣಿಸುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಣರೋಚಕ ಗೆಲುವು ದಾಖಲಿಸಿತು. ಆರ್ಸಿಬಿಯ ಈ ಗೆಲುವಿನ ರೂವಾರಿಗಳೆಂದರೆ ಅದು ಭುವನೇಶ್ವರ್ ಕುಮಾರ್ ಹಾಗೂ ಕೃನಾಲ್ ಪಾಂಡ್ಯ. ಕೃನಾಲ್ ಬ್ಯಾಟಿಂಗ್ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದರೆ, ಇತ್ತ ಭುವನೇಶ್ವರ್ ಬೌಲಿಂಗ್ನಲ್ಲಿ 4 ವಿಕೆಟ್ ಪಡೆಯುವುದರ ಜೊತೆಗೆ ಬ್ಯಾಟಿಂಗ್ನಲ್ಲಿ ಗೆಲುವಿನ ಸಿಕ್ಸರ್ ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಂಬೈ 166 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆರ್ಸಿಬಿ 2 ವಿಕೆಟ್ಗಳ ಜಯ ಸಾಧಸಿತು. ಈ ಗೆಲುವಿನೊಂದಿಗೆ ಆರ್ಸಿಬಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಇತ್ತ ಮುಂಬೈ ಇಂಡಿಯನ್ಸ್ ಪ್ಲೇ ಆಫ್ನಿಂದ ಅಧಿಕೃತವಾಗಿ ಹೊರಬಿದ್ದಿತು.
Published On – 11:53 pm, Sun, 10 May 26