ವಿಜಯನಗರ, ಮೇ 12: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಉಪವಿಭಾಗದಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ಕು ಪ್ರಮುಖ ಮನೆಗಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೂಡ್ಲಿಗಿ ಉಪವಿಭಾಗದ ಪೊಲೀಸರು ನಡೆಸಿದ ಸತತ ಕಾರ್ಯಾಚರಣೆಯಲ್ಲಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದ್ದು, ಕಳುವಾಗಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡಿರುವ ಆಭರಣಗಳ ಮೌಲ್ಯ 14.06 ರೂಪಾಯಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ, ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳು, ತಂಬ್ರಹಳ್ಳಿ ಪೊಲೀಸ್ ಠಾಣೆಯ 23/2026ನೇ ಕೇಸು ಮತ್ತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯ 62/2026ನೇ ಕೇಸು ಸೇರಿದಂತೆ ಒಟ್ಟು ನಾಲ್ಕು ಮನೆಗಳ್ಳತನ ಪ್ರಕರಣಗಳನ್ನು ಭೇದಿಸಿದಂತಾಗಿದೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಕೂಡ್ಲಿಗಿ ಡಿವೈಎಸ್ಪಿ, ಹಗರಿಬೊಮ್ಮನಹಳ್ಳಿ ಸಿಪಿಐ ಮತ್ತು ಅವರ ತಂಡ, ತಂಬ್ರಹಳ್ಳಿ ಪಿಎಸ್ಐ ಮತ್ತು ಅವರ ತಂಡ, ಹಾಗೂ ಮರಿಯಮ್ಮನಹಳ್ಳಿ ಪಿಎಸ್ಐ ಮತ್ತು ಅವರ ತಂಡದ ಶ್ರಮವನ್ನು ಪೊಲೀಸ್ ಇಲಾಖೆ ಶ್ಲಾಘಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ