IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮೇ 13) ರಾಯ್ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 4+2+6 ಸಂಯೋಜನೆಯನ್ನು ರೂಪಿಸಲಿದ್ದಾರೆ.
ಅದರಂತೆ ಆರ್ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ಕೃನಾಲ್ ಪಾಂಡ್ಯ ಹಾಗೂ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಬೌಲರ್ಗಳಾಗಿ ಆರ್ಸಿಬಿ ಪರ ಜೋಶ್ ಹೇಝಲ್ವುಡ್, ಭುವನೇಶ್ವರ್ ಕುಮಾರ್, ರಾಸಿಖ್ ದಾರ್ ಕಾಣಿಸಿಕೊಳ್ಳುವುದು ಖಚಿತ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ಪಿನ್ನರ್ ಸುಯಶ್ ಶರ್ಮಾ ಕೂಡ ಸೇರ್ಪಡೆಯಾಗಲಿದ್ದಾರೆ.
ಅಂದರೆ ಆರು ಬ್ಯಾಟರ್ಗಳು, ಇಬ್ಬರು ಆಲ್ರೌಂಡರ್ಗಳು ಮತ್ತು ನಾಲ್ವರು ಬೌಲರ್ಗಳೊಂದಿಗೆ ಆರ್ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ವಿರಾಟ್ ಕೊಹ್ಲಿ
- ಜೇಕಬ್ ಬೆಥೆಲ್
- ದೇವದತ್ ಪಡಿಕ್ಕಲ್
- ರಜತ್ ಪಾಟಿದಾರ್ (ನಾಯಕ)
- ಟಿಮ್ ಡೇವಿಡ್
- ಜಿತೇಶ್ ಶರ್ಮಾ
- ರೊಮಾರಿಯೊ ಶೆಫರ್ಡ್
- ಕೃನಾಲ್ ಪಾಂಡ್ಯ
- ಜೋಶ್ ಹೇಝಲ್ವುಡ್
- ಭುವನೇಶ್ವರ್ ಕುಮಾರ್
- ರಾಸಿಖ್ ದಾರ್
- ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).
ಇದನ್ನೂ ಓದಿ: IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ