Headlines

ಹೀಗಾದ್ರೆ ಪಂಜಾಬ್ ಪ್ಲೇಆಫ್​ಗೇರಲ್ಲ; ಈ ತಂಡಗಳು ಸೋತರೆ ಮಾತ್ರ ಚಾನ್ಸ್ – Kannada News | Punjab Kings IPL Playoff: How Other Teams’ Losses Can Save PBKS Season

ಐಪಿಎಲ್​ನ ಈ ಸೀಸನ್​ ಅಲ್ಲಿ ಪಂಜಾಬ್ ಕಿಂಗ್ಸ್ ಸತತ ಐದು ಸೋಲುಗಳನ್ನು ಕಂಡಿದೆ. ಟೂರ್ನಿಯ ಆರಂಭದಲ್ಲಿ ಅಬ್ಬರಿಸಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಶ್ರೇಯಸ್ ಅಯ್ಯರ್ ಪಡೆ ನಂತರ ಎಡವಿದೆ. ಸದ್ಯಕ್ಕೆ ಈ ತಂಡ ನಾಲ್ಕನೇ ಸ್ಥಾನದಲ್ಲಿದ್ದರೂ, ಪ್ಲೇ-ಆಫ್ ಹಾದಿ ಮಾತ್ರ ಅಂದುಕೊಂಡಷ್ಟು ಸುಲಭವಾಗಿಲ್ಲ. ಈಗ ಮುಂದಿನ ಎರಡು ಪಂದ್ಯಗಳನ್ನು ಗೆದ್ದರೂ ಅಧಿಕೃತವಾಗಿ ಮುಂದಿನ ಹಂತಕ್ಕೇರುತ್ತಾರೆ ಎಂಬ ಗ್ಯಾರಂಟಿ ಇಲ್ಲ. ಪಂಜಾಬ್ ತಂಡಕ್ಕೆ ಗೆಲುವಷ್ಟೇ ಅಲ್ಲ, ಅದೃಷ್ಟವೂ ಬೇಕಿದೆ.

ಸೀಸನ್‌ನ ಮೊದಲಾರ್ಧದಲ್ಲಿ ಸತತ ಆರು ಗೆಲುವುಗಳೊಂದಿಗೆ ಬೀಗುತ್ತಿದ್ದ ಪಂಜಾಬ್ ತಂಡಕ್ಕೆ ಎರಡನೇ ಹಂತದಲ್ಲಿ ಅದೃಷ್ಟ ಕೈಕೊಟ್ಟಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿ ಅಂಕ ಹಂಚಿಕೆಯಾಗಿದ್ದು ತಂಡಕ್ಕೆ ಹಿನ್ನಡೆಯಾಯಿತು. ಸದ್ಯ 13 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಪಂಜಾಬ್, ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ ಇತರ ತಂಡಗಳ ಫಲಿತಾಂಶದ ಮೇಲೆ ಕಣ್ಣಿಡಬೇಕಾದ ಅನಿವಾರ್ಯತೆ ಇದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಗೆಲುವುಗಳೊಂದಿಗೆ (16 ಅಂಕ) ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. +1.053 ರನ್‌ರೇಟ್ ಹೊಂದಿರುವುದು ತಂಡದ ಪ್ಲಸ್ ಪಾಯಿಂಟ್. ಅಷ್ಟೇ ಅಂಕ ಹೊಂದಿರುವ ಗುಜರಾತ್ ಟೈಟಾನ್ಸ್ ಎರಡನೇ ಸ್ಥಾನದಲ್ಲಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಪಂಜಾಬ್​​ಗೆ ಬಾಕಿ ಇರೋದು ಇನ್ನು ಎರಡು ಪಂದ್ಯಗಳು ಮಾತ್ರ. ಅದೆರಡೂ ಪಂದ್ಯ ಗೆದ್ದರೆ ತಂಡದ ಅಂಕ 17 ಆಗಲಿದೆ. 5 ಹಾಗೂ ಆರನೇ ಸ್ಥಾನದಲ್ಲಿರುವ ಸಿಎಸ್​​ಕೆ ಹಾಗೂ ಆರ್​​ಆರ್​ ತಂಡ ತಲಾ 12 ಅಂಕ ಗಳಿಸಿವೆ. ಈ ತಂಡಗಳಿಗೆ ಇರೋದು ತಲಾ ಮೂರು ಪಂದ್ಯಗಳು. ಹೀಗಾಗಿ, ಎರಡೂ ತಂಡಗಳು ಮೂರಕ್ಕೆ ಮೂರು ಪಂದ್ಯ ಗೆದ್ದರೆ 18 ಅಂಕ ಆಗಲಿವೆ.ಆರ್​​ಸಿಬಿ ಸೇರಿದಂತೆ ಟಾಪ್ ಆರರಲ್ಲಿರುವ ಬಹುತೇಕ ಎಲ್ಲಾ ತಂಡಗಳ ಸೋಲು ಪಂಜಾಬ್​​ಗೆ ಪ್ಲಸ್ ಆಗಲಿದೆ.

ಇದನ್ನೂ ಓದಿ: ನಾಯಕನಾಗಿ ಚೊಚ್ಚಲ ಪಂದ್ಯದಲ್ಲಿ ಗೆದ್ದ ಬುಮ್ರಾ; ಪಂಜಾಬ್​ಗೆ ಸತತ 5ನೇ ಸೋಲು

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ ಮಂಕಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮುಂಬೈ ತಂಡ ಎಲಿಮಿನೇಟ್ ಆಗಿರುವುದರಿಂದ ಪಂಜಾಬ್ ವಿರುದ್ಧದ ಪಂದ್ಯ ಗೆದ್ದರೂ ಯಾವುದೇ ಬದಲಾವಣೆ ಇಲ್ಲ. ಆದರೆ, ಪಂಜಾಬ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:46 am, Fri, 15 May 26

Source link

Leave a Reply

Your email address will not be published. Required fields are marked *