ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ – Kannada News | Fire Breaks Out in Thiruvananthapuram–Hazrat Nizamuddin Rajdhani Express in Madhya Pradesh

ಭೋಪಾಲ್, ಮೇ 17:ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಗಮನಕ್ಕೆ ಬರುತ್ತಿದ್ದಂತೆ ರೈಲ್ವೆ ಸಿಬ್ಬಂದಿ ತಕ್ಷಣ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೆಂಕಿ ತಗುಲಿದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *