ಇಂಧನ ಬೆಲೆ ಮತ್ತಷ್ಟು ಹೆಚ್ಚಳ: ತಜ್ಞರಿಂದ 8ರಿಂದ 10 ರೂಪಾಯಿ ಏರಿಕೆ ಬಗ್ಗೆ ಭವಿಷ್ಯ – Kannada News | Fuel Price Hike: Experts Warn of Eight to Ten Rupee Increase Amid Global Oil Crisis

ಬೆಂಗಳೂರು, ಮೇ 17: ಇಂಧನ ಬೆಲೆ ಏರಿಕೆ ದೇಶದಲ್ಲಿ ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಮತ್ತು ಡಿಸೇಲ್ ದರಗಳು ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿರುವ ಬೆನ್ನಲ್ಲೇ, ಸಿಎನ್‌ಜಿ ಬೆಲೆಯು ಸಹ ಕಳೆದ ಎರಡು ದಿನಗಳಲ್ಲಿ ಒಟ್ಟು ಮೂರು ರೂಪಾಯಿ ಹೆಚ್ಚಾಗಿದೆ. ಆದರೆ, ತಜ್ಞರ ಪ್ರಕಾರ, ಈ ಏರಿಕೆ ಕೇವಲ ಆರಂಭವಷ್ಟೇ. ಜಾಗತಿಕ ತೈಲ ಬಿಕ್ಕಟ್ಟು ಮತ್ತು ಬೆಲೆ ಏರಿಕೆಯ ಪ್ರವೃತ್ತಿ ಗಮನಿಸಿದರೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ಬರುವ ದಿನಗಳಲ್ಲಿ ಎಂಟರಿಂದ ಹತ್ತು ರೂಪಾಯಿಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಈ ಇಂಧನ ಬೆಲೆ ಏರಿಕೆಯು ಕೇವಲ ವಾಹನ ಸವಾರರ ಮೇಲೆ ಮಾತ್ರವಲ್ಲದೆ, ಇಡೀ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಡಿಸೇಲ್ ಬೆಲೆ ಹೆಚ್ಚಳದಿಂದ ಸರಕು ಸಾಗಣೆ ವಾಹನಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಲಿದ್ದು, ಇದು ದಿನನಿತ್ಯ ಬಳಕೆಯ ವಸ್ತುಗಳ ಬೆಲೆಯ ಮೇಲೆ ನೇರ ಪರಿಣಾಮ ಬೀರಲಿದೆ. ಪೆಟ್ರೋಲಿಯಂ ಇಲಾಖೆಯ ಪ್ರಕಾರ, ಭಾರತದಲ್ಲಿ ಪ್ರತಿದಿನ ಕನಿಷ್ಠ 55 ಲಕ್ಷ ಬ್ಯಾರೆಲ್ ಕಚ್ಚಾ ತೈಲಕ್ಕೆ ಬೇಡಿಕೆಯಿದ್ದು, ಸದ್ಯ 65 ದಿನಗಳಿಗೆ ಸಾಕಾಗುವಷ್ಟು ಪೆಟ್ರೋಲ್ ಮತ್ತು ಡಿಸೇಲ್ ಸಂಗ್ರಹವಿದೆ. ಈ ಪರಿಸ್ಥಿತಿಯು ಗ್ರಾಹಕರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಷ್ಟ ತರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *