ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಕಳೆದ ಬಾರಿಯ ಫೈನಲಿಸ್ಟ್ಗಳ ನಡುವಿನ ಪಂದ್ಯವಾಗಿದ್ದರಿಂದ ಸಾಕಷ್ಟು ನಿರೀಕ್ಷೆಗಳಿದ್ದವು. ಒಂದೆಡೆ ಆರ್ಸಿಬಿಗೆ ಪ್ಲೇಆಫ್ ಟಿಕೆಟ್ ಪಡಿಸಿಕೊಳ್ಳುವ ಇರಾದೆಯಿದ್ದರೆ, ಇತ್ತ ಪಂಜಾಬ್ಗೆ ಕಳೆದ ಫೈನಲ್ಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿರಲು ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿತ್ತು. ಆದರೆ ಈ ಪಂದ್ಯದಲ್ಲಿ ಕಳೆದ ಬಾರಿಯ ಫೈನಲ್ ಫಲಿತಾಂಶವನ್ನು ಪುನರಾವರ್ತಿಸಿದ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ತನ್ನ ಗೆಲುವಿನ ಓಟವನ್ನು ಮುಂದುವರೆಸಿತು. ಇತ್ತ ಸೋತ ಪಂಜಾಬ್ ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 222 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ 199 ರನ್ ಗಳಿಸಲಷ್ಟೇ ಶಕ್ತವಾಗಿ 23 ರನ್ಗಳಿಂದ ಸೋಲನುಭವಿಸಿತು.
Published On – 7:20 pm, Sun, 17 May 26