ಚಿಕ್ಕಮಗಳೂರು, ಮೇ 18: ಮಲೆನಾಡಲ್ಲಿ ಕಾಡು ಕೋಣಗಳ ಉಪಟಳ ಮಿತಿ ಮೀರಿದ್ದು, ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಂಡು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಕಳಸ ತಾಲೂಕಿನ ಹೊರನಾಡು ಸಮೀಪದ ಎಳಕುಂಬ್ರಿಯಲ್ಲಿ ನಡೆದಿದೆ. ಗುಡ್ಡದಲ್ಲಿ 20ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಅವುಗಳ ಓಡಾಟದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊರನಾಡು, ಎಳಕುಂಬ್ರಿ ಸುತ್ತಮುತ್ತ ಕಾಡುಕೋಣಗಳು ಬೆಳೆ ಹಾನಿ ಮಾಡುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.