ಬೆಂಗಳೂರಲ್ಲಿ ಲೇಡಿ ಡಾನ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಮಹಿಳೆ – Kannada News | Bengaluru Real Estate Extortion Case Woman Posing as Youth Wing Chief Threatens Businessman for Rs 10 Lakh Huphta

ಬೆಂಗಳೂರು, ಮೇ 18: ಮಹಿಳೆಯೊಬ್ಬಳು ತಾನು ಸಂಘಟನೆಯೊಂದರ ಪ್ರಮುಖ ನಾಯಕಿ ಎಂದು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕಚೇರಿಗೆ ನುಗ್ಗಿ, ಜೀವ ಬೆದರಿಕೆ ಹಾಕಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಗೀತ ರಾಮ್ ಎಂಬ ಮಹಿಳೆ ಹಾಗೂ ಆಕೆಯೊಂದಿಗೆ ಬಂದಿದ್ದ ಇಬ್ಬರು ಪುರುಷರು ಸೇರಿ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಅವರಿಗೆ ಈ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿರುವ ವೆಂಕಟರಾಜು ಅವರ ಕಚೇರಿಗೆ ನುಗ್ಗಿದ ಸಂಗೀತ ರಾಮ್, ತಾನು ಸಂಘಟನೆಯೊಂದರ ಯುವಸೇನೆಯ ಮುಖ್ಯಸ್ಥೆ ಹಾಗೂ ಮಹಿಳಾ ಸಂಘದ ಅಧ್ಯಕ್ಷೆ ಎಂದು ಹೇಳಿಕೊಂಡು ಧಮ್ಕಿ ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ. ಶಿವಾಜಿನಗರದಲ್ಲಿರುವ ಸೈಟ್‌ ಒಂದನ್ನು ವೆಂಕಟರಾಜು ಅವರು ರಿಜಿಸ್ಟರ್ಡ್ ಅಗ್ರಿಮೆಂಟ್ ಮಾಡಿಸಿಕೊಂಡಿದ್ದರು. ಇದೇ ಜಾಗದ ವಿಚಾರವನ್ನು ಮುಂದಿಟ್ಟುಕೊಂಡು ಕಚೇರಿಯಲ್ಲಿ ರಂಪಾಟ ಮಾಡಿರುವ ಮಹಿಳೆ, ‘ನೀನು ಅಗ್ರಿಮೆಂಟ್ ಮಾಡಿಸಿಕೊಂಡಿದ್ದರೂ ಆ ಜಾಗದ ಕಡೆ ತಲೆಹಾಕಬಾರದು. ನಾವು ನಿನ್ನ ತಂಟೆಗೆ ಬರಬಾರದು ಎಂದರೆ ತಕ್ಷಣ 10 ಲಕ್ಷ ರೂಪಾಯಿ ನೀಡಬೇಕು’ ಎಂದು ಹಫ್ತಾಗೆ ಬೇಡಿಕೆ ಇಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.

ಅಲ್ಲದೆ, ಒಂದು ವೇಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಕಚೇರಿಗೆ ನುಗ್ಗಿ ಹೊಡೆಯುವುದಾಗಿ ಮತ್ತು 15 ರಿಂದ 20 ಜನರನ್ನು ಕರೆಸಿ ಕೊಲೆ ಮಾಡಿಸುವುದಾಗಿ ದರ್ಪ ತೋರಿದ್ದಾಳೆ ಎಂದು ಉದ್ಯಮಿ ವೆಂಕಟರಾಜು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರ ಆಧಾರದಲ್ಲಿ ಕೊಡಿಗೆಹಳ್ಳಿ ಪೊಲೀಸಲು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *