ಇಂಡಿಯನ್ ಪ್ರೀಮಿಯರ್ ಲೀಗ್ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಆರ್ಆರ್ ಪಡೆ ಪ್ಲೇಆಫ್ಗೇರಬಹುದು. ಒಂದು ವೇಳೆ ಸೋತರೆ ಪ್ಲೇಆಫ್ಗೇರುವುದು ಕಷ್ಟಸಾಧ್ಯ. ಹೀಗಾಗಿ ಇಂದಿನ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.
ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ 2 ಬಾರಿ ಗೆಲುವು ದಾಖಲಿಸಿದೆ. ಈ ಅಂಕಿ ಅಂಶಗಳು ಹಾಗೂ ಪ್ರಸ್ತುತ ಫಾರ್ಮ್ ಗಮನಿಸಿದರೆ ಇಂದಿನ ಮ್ಯಾಚ್ನಲ್ಲಿ ಆರ್ಆರ್ ಪಡೆ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.
ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್, ಕುಲದೀಪ್ ಸೇನ್.