
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್ಗೆ ಬಹಳ ಮುಖ್ಯವಾಗಿತ್ತು. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ರಾಜಸ್ಥಾನ್ ರಾಯಲ್ಸ್ ತಂಡ 4ನೇ ತಂಡವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ಗೆಲುವಿನಿಂದ ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳ ಪ್ಲೇಆಫ್‌ಗೇರುವ ಕನಸು ಕಮರಿ ಹೋಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 205 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ 175 ರನ್ಗಳಿಸಲಷ್ಟೇ ಶಕ್ತವಾಗಿ 35 ರನ್ಗಳಿಂದ ಸೋಲೊಪ್ಪಿಕೊಂಡಿತು.