ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಮುಕ್ತವಾಗಿ ಬಿಟ್ಟಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ