ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ.
ಟಾಸ್ ಗೆದ್ದ ಗುಜರಾತ್
ಮೇಲೆ ಹೇಳಿದಂತೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದಿದ್ದು, ಉಭಯ ತಂಡಗಳಲ್ಲೂ ಒಂದೊಂದು ಬದಲಾವಣೆಗಳನ್ನು ಮಾಡಲಾಗಿದೆ. ಆರ್ಸಿಬಿ ತಂಡದಲ್ಲಿ ರೋಮಾರಿಯೋ ಶೆಫರ್ಡ್ ಬದಲಿಗೆ ಜೆಕೋಬ್ ಡಫಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.
ಉಭಯ ತಂಡಗಳ ಪ್ಲೇಯಿಂಗ್ 11
ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ವೆಂಕಟೇಶ್ ಅಯ್ಯರ್, ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಜಾಕೋಬ್ ಡಫ್ಫಿ ಮತ್ತು ರಸಿಖ್ ಸಲಾಂ.
ಇಂಪ್ಯಾಕ್ಟ್ ಪ್ಲೇಯರ್ಸ್: ರೊಮಾರಿಯೋ ಶೆಫರ್ಡ್, ಸುಯಾಶ್ ಶರ್ಮಾ, ಕನಿಷ್ಕ್ ಚೌಹಾನ್, ಅಭಿನಂದನ್ ಸಿಂಗ್ ಮತ್ತು ಜೋರ್ಡಾನ್ ಕಾಕ್ಸ್.
ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ನಿಶಾಂತ್ ಸಿಂಧು, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಶೀದ್ ಖಾನ್, ಕುಲ್ವಂತ್ ಖೆಜ್ರೋಲಿಯಾ (ಅರ್ಷದ್ ಖಾನ್ ಬದಲಾಗಿ), ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಇಂಪ್ಯಾಕ್ಟ್ ಪ್ಲೇಯರ್ಸ್: ರಾಹುಲ್ ತೆವಾಟಿಯಾ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ ಮತ್ತು ಸಾಯಿ ಕಿಶೋರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ