
ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸೋತ ತಂಡ ಐಪಿಎಲ್ನಿಂದ ಹೊರಬೀಳುವುದರಿಂದ ಉಭಯ ತಂಡಗಳು ಗೆಲುವಿಗಾಗಿ ಭರ್ಜರಿ ತಯಾರಿ ಮಾಡಿಕೊಂಡು ಅಖಾಡಕ್ಕಿಳಿದಿದ್ದವು. ಆದಾಗ್ಯೂ 15 ವರ್ಷದ ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ಪ್ರವಾಹಕ್ಕೆ ಕೊಚ್ಚಿ ಹೋದ ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 47 ರನ್ಗಳಿಂದ ಸೋತು ಫೈನಲ್ ರೇಸ್ನಿಂದ ಹೊರಬಿದ್ದಿತು. ಇತ್ತ ಸನ್‌ರೈಸರ್ಸ್ ವಿರುದ್ಧ ಗೆದ್ದ ರಾಜಸ್ಥಾನ್, ಮೇ 29 ರಂದು ನಡೆಯಲಿರುವ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 245 ರನ್ಗಳ ಬೃಹತ್ ಗುರಿ ದಾಖಲಿಸಿತು. ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ತಂಡ ಬ್ಯಾಟಿಂಗ್ ವಿಭಾಗದ ವೈಫಲ್ಯದಿಂದ ಹೀನಾಯವಾಗಿ ಸೋಲನುಭವಿಸಿತು.