ಬುಧವಾರವೂ ಜಾರ್ಜ್‌ಕುಟ್ಟಿ ಕಮಾಲ್; 7 ದಿನಕ್ಕೆ ‘ದೃಶ್ಯಂ 3’ ಗಳಿಕೆ ಎಷ್ಟು?

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ 3’, ಬಾಕ್ಸ್ ಆಫೀಸ್‌ನಲ್ಲಿ ನಾಗಾಲೋಟ ಮುಂದುವರಿಸಿದೆ. ಮೇ 21ರಂದು ರಿಲೀಸ್ ಆದ ಈ ಫ್ಯಾಮಿಲಿ ಕ್ರೈಮ್ ಥ್ರಿಲ್ಲರ್ ಸಿನಿಮಾ, ಮೊದಲ ವಾರಾಂತ್ಯದಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ವಾರದ ದಿನಗಳಲ್ಲಿ ಸಹಜವಾಗಿಯೇ ಕಲೆಕ್ಷನ್ ಕೊಂಚ ಕುಸಿದಿತ್ತಾದರೂ, ಬುಧವಾರ (ಮೇ 27) ಚಿತ್ರದ ಗಳಿಕೆಯಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬಂದಿದೆ. ಇದರೊಂದಿಗೆ ಬಿಡುಗಡೆಯಾದ ಕೇವಲ 7 ದಿನಗಳಲ್ಲೇ ಸಿನಿಮಾ ಭಾರತದಾದ್ಯಂತ 75 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಬರೆದಿದೆ.

ಬಾಕ್ಸ್ ಆಫೀಸ್ ಟ್ರ್ಯಾಕರ್ ‘ಸ್ಯಾಕ್ನಿಲ್ಕ್’ ಅಂಕಿ-ಅಂಶಗಳ ಪ್ರಕಾರ, 7ನೇ ದಿನ ಈ ಚಿತ್ರ ಭಾರತದಲ್ಲಿ ಬರೋಬ್ಬರಿ 6.65 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಿಶೇಷವೆಂದರೆ, ಮಂಗಳವಾರ ಈ ಚಿತ್ರ 6.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇಂದು (ಮೇ 28) ಬಕ್ರೀದ್ ಪ್ರಯುಕ್ತ ಸರ್ಕಾರಿ ರಜೆ ಇದ್ದು, ಚಿತ್ರ ಮತ್ತಷ್ಟು ಗಳಿಸಬಹುದು.
ಭಾರತದಲ್ಲಿ ಚಿತ್ರದ 7 ದಿನಗಳ ಒಟ್ಟು ನೆಟ್ ಕಲೆಕ್ಷನ್ 75.30 ಕೋಟಿ ರೂಪಾಯಿಗೆ ತಲುಪಿದ್ದು, ಗ್ರಾಸ್ ಕಲೆಕ್ಷನ್ 87.38 ಕೋಟಿ ರೂಪಾಯಿ ಮುಟ್ಟಿದೆ. ಭಾರತದಷ್ಟೇ ವಿದೇಶದಲ್ಲೂ ಈ ಚಿತ್ರಕ್ಕೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. 7ನೇ ದಿನ ವಿದೇಶಿ ಮಾರುಕಟ್ಟೆಯಿಂದಲೇ ಚಿತ್ರಕ್ಕೆ 5 ಕೋಟಿ ರೂಪಾಯಿ ಹರಿದುಬಂದಿದೆ. ಇದರೊಂದಿಗೆ ವಿದೇಶದ ಒಟ್ಟು ಗ್ರಾಸ್ ಗಳಿಕೆ ಬರೋಬ್ಬರಿ 95.70 ಕೋಟಿ ರೂಪಾಯಿಗೆ ತಲುಪಿದೆ.

ಭಾರತ ಹಾಗೂ ವಿದೇಶಿ ಕಲೆಕ್ಷನ್ ಎರಡನ್ನೂ ಒಟ್ಟುಗೂಡಿಸಿದರೆ, ‘ದೃಶ್ಯಂ 3’ ಚಿತ್ರದ ವಿಶ್ವಾದ್ಯಂತ ಒಟ್ಟು ಜಾಗತಿಕ ಗ್ರಾಸ್ ಕಲೆಕ್ಷನ್ ಸದ್ಯ 183.08 ಕೋಟಿ ರೂಪಾಯಿ ತಲುಪಿದೆ. ಇನ್ನು ಕೇವಲ ಎರಡು ದಿನಗಳಲ್ಲಿ ಸಿನಿಮಾ ಸುಲಭವಾಗಿ 200 ಕೋಟಿ ಕ್ಲಬ್ ಸೇರುವುದು ಖಚಿತವಾಗಿದೆ.

ಇದನ್ನೂ ಓದಿ:  ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಮಾಡಿದ ‘ದೃಶ್ಯಂ 3’; ಒಟ್ಟೂ ಗಳಿಕೆ ಎಷ್ಟು?

ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಮಾತ್ರ ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ಮೋಹನ್‌ಲಾಲ್ ಜೊತೆಗೆ ಮೀನಾ, ಅನ್ಸಿಬಾ ಹಸನ್, ಎಸ್ತರ್ ಅನಿಲ್, ಸಿದ್ದಿಕ್ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *