Headlines

ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ, ಆಗಿದ್ದೇನು?

ಬೆಂಗಳೂರು, (ಮೇ 28): ದೆಹಲಿಗೆ ಪ್ರಯಾಣಿಸುತ್ತಿದ್ದ ಸಿದ್ದರಾಮಯ್ಯ (Siddaramaiah) ಇದ್ದ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡ್ ಆಗಿರುವ ಘಟನೆ ನಡೆದಿದೆ. ಇಂದು (ಮೇ 28) ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಗೋಷ್ಠಿ ಬಳಿಕ ಸಂಜೆ ಬೆಂಗಳೂರಿನ ಎಚ್​​​​​​ಎಎಲ್ ಏರ್​​ಪೋರ್ಟ್​​​​ನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದರು. ಆದ್ರೆ, ಮಾರ್ಗಮಧ್ಯೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ವಿಶೇಷ ವಿಮಾನ, ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡ್ ಆಗಿದೆ. ಇದರಿಂದ ಕೆಲವೊತ್ತು ಆತಂಕಕ್ಕೆ ಕಾರಣವಾಯ್ತು.

ಮುಖ್ಯಾಂಶಗಳು

  • ರಾಜೀನಾಮೆ ಬಳಿಕ ದೆಹಲಿಗೆ ತೆರಳುತ್ತಿದ್ದ ಸಿದ್ದರಾಮಯ್ಯನನ್ನು ಜೈಪುರದಲ್ಲಿ ಇಳಿಸಿದ ವಿಮಾನ
  • ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ
  • ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಜೈಪುರದಲ್ಲಿ ವಿಮಾನ ಲ್ಯಾಂಡಿಂಗ್
  •  ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟಿದ್ದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ,
ಸಚಿವರಾದ ಕೆ.ಜೆ.ಜಾರ್ಜ್, ಭೈರತಿ ಸುರೇಶ್, ಶಾಸಕ ಎ.ಎಸ್.ಪೊನ್ನಣ್ಣ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಯತೀಂದ್ರ ವಿಮಾನದಲ್ಲಿದ್ದರು. ಸದ್ಯ ಯಾವುದೇ ಅವಘಡ ಸಂಭವಿಸಿಲ್ಲ. ವಿಮಾನದಲ್ಲಿದ್ದವರು ಎಲ್ಲರೂ ಸುರಕ್ಷಿತವಾಗಿದ್ದಾರೆ.

ರಾಜೀನಾಮೆ ಬಳಿಕ ದಿಲ್ಲಿ ವಿಮಾನ ಹತ್ತಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ್ಕಕೆ ರಾಜೀನಾಮೆ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬಳಿಕ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಇಂದು (ಮೇ 28) ಸಂಜೆ ತಮ್ಮ ಆಪ್ತರ ಜೊತೆ ಬೆಂಗಳೂರಿನ ಎಚ್​​​ಎಎಲ್ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಯತ್ತ ಹೊರಟರು. ಆದ್ರೆ, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಪೈಲೆಟ್, ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿ ಬರುವಂತೆ ರಾಹುಲ್ ಗಾಂಧಿ ಅವರು ಸೂಚಿಸಿದ್ದರು. ಅದರಂತೆ ಸಿದ್ದರಾಮಯ್ಯ ದೆಹಲಿಯತ್ತ ಹೊರಟ್ಟಿದ್ದು, ಹೈಕಮಾಂಡ್ ನಾಯಕರ ಜೊತೆ ಮುಂದಿನ ಆಡಳಿತದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಂದರೆ ಯಾರ್ಯಾರು ಸಚಿವರಾಗಬೇಕು? ಯಾರನ್ನು ಉಪಮುಖ್ಯಮಂತ್ರಿ ಮಾಡಬೇಕು? ಕೆಪಿಸಿಸಿ ಜವಾಬ್ದಾರಿ ಯಾರಿಗೆ ನೀಡಬೇಕು? ಹೀಗೆ ಹಲವು ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರ ಜತೆ ಚರ್ಚಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *