ಮಂಗಳೂರಿನ ಜನರೇ ಸಂಜೆ 6ರೊಳಗೆ ಮನೆಗೆ ತಲುಪಿ!: ಇಂದು ಕರಾವಳಿ ಹಾಗೂ ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರು, ಮೇ.29: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಮುನ್ಸೂಚನೆ ಹೆಚ್ಚಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಭಾರಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಜಂಟಿ ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಇಂದಿನಿಂದ (ಮೇ 29) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇನ್ನು ಬೆಂಗಳೂರಿನಲ್ಲೂ ಕೂಡ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು (ಮೇ 29) ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮೇ 29 ಮತ್ತು 30ರಂದು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಮೇ 31 ರಿಂದ ಜೂನ್ 2 ರವರೆಗೆ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ಎಚ್ಚರಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಇದನ್ನೂ ಓದಿ: ಸಿಲ್ಕ್ ಬೋರ್ಡ್ ಜಂಕ್ಷನ್ ಈಗ ‘ಸ್ವಿಮ್ಮಿಂಗ್ ಪೂಲ್’!: ಕೋಟಿ ಕೋಟಿ ಖರ್ಚು ಮಾಡಿದ್ರೂ ಸುಧಾರಿಸದ ಸಿಲಿಕಾನ್ ಸಿಟಿ

ಇತ್ತ ಉತ್ತರ ಒಳನಾಡಿನ (NIK) ಜಿಲ್ಲೆಗಳಲ್ಲಿ ಮೇ 29 ರಿಂದ ಜೂನ್ 2 ರವರೆಗೆ ಒಂದು ಅಥವಾ ಎರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರಾವಳಿ ಕರ್ನಾಟಕದ (Coastal Karnataka) ಜಿಲ್ಲೆಗಳಲ್ಲೂ ಸಹ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಸಿಡಿಲು ಹಾಗೂ ಮಿಂಚಿನಿಂದ ಕೂಡಿರುವ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಮೀನುಗಾರರು ಮತ್ತು ನದಿ ತೀರದ ಜನರಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *