
ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ 700 ರನ್‌ಗಳ ಗಡಿ ದಾಟಿದರು. ಇದರ ಜೊತೆಗೆ ಪ್ಲೇಆಫ್‌ನಲ್ಲಿ 500 ರನ್ ಪೂರೈಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ 500 ರನ್ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.