Headlines

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್

ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ  ರಾಜ್ಯದ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *