
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ ಪವರ್ಪ್ಲೇನಲ್ಲೇ ಅಂದರೆ ಮೊದಲ 6 ಓವರ್ಗಳಲ್ಲೇ ತನ್ನ ಬ್ಯಾಟಿಂಗ್ ಆಧಾರಸ್ತಂಭಗಳಾಗಿದ್ದ ನಾಯಕ ಶುಭ್ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರ ವಿಕೆಟ್ ಕಳೆದುಕೊಂಡಿದೆ. ಈ ಎರಡು ವಿಕೆಟ್ಗಳು ಕೇವಲ 26 ರನ್ಗಳಿಗೆ ಪತನವಾದವು. ಇದರ ಪರಿಣಾಮವಾಗಿ ಗುಜರಾತ್ ಪವರ್ಪ್ಲೇನಲ್ಲಿ 2 ವಿಕೆಟ್ ಕಳೆದುಕೊಂಡು 45 ರನ್ ಕಲೆಹಾಕಿದೆ.