ಮಂಡ್ಯದಲ್ಲಿ ಆರ್‌ಸಿಬಿ ಅಭಿಮಾನಿ ಯುವಕರ ಹುಚ್ಚಾಟ: ಪೊಲೀಸರಿಂದ ಲಾಠಿ ಪ್ರಹಾರ!

ಮಂಡ್ಯ, ಜೂನ್ 1: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಗುಜರಾತ್ ಟೈಟನ್ಸ್ ವಿರುದ್ಧ ಜಯಭೇರಿ ಬಾರಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಸಕ್ಕರೆ ನಾಡು ಮಂಡ್ಯದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮೇರೆ ಮೀರಿತು. ನಗರದ ಪ್ರಮುಖ ಕೇಂದ್ರವಾದ ಸಂಜಯ ವೃತ್ತದಲ್ಲಿ ಜಮಾಯಿಸಿದ ನೂರಾರು ಆರ್‌ಸಿಬಿ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದು, ಪರಿಸ್ಥಿತಿ ಕೈಮೀರಿದಾಗ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ. ವಿಜಯೋತ್ಸವದ ಹಿನ್ನೆಲೆಯಲ್ಲಿ ಸಂಜಯ ವೃತ್ತದಲ್ಲಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಕೆಲವು ಯುವಕರು ಹಳೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕು ಸಾಗಣೆ ಲಾರಿಗಳ ಮೇಲೆ ಏರಿ ಪ್ರಾಣದ ಹಂಗು ತೊರೆದು ಮೊಂಡಾಟ ಮೆರೆದರು. ಲಾರಿಗಳ ಚಲನೆಗೆ ಅಡ್ಡಿಪಡಿಸಿ ರಸ್ತೆಯಲ್ಲೇ ಅತಿರೇಕದ ಸಂಭ್ರಮಾಚರಣೆ ಮುಂದುವರಿಸಿದರು. ಸಾರ್ವಜನಿಕರ ಜೀವಕ್ಕೆ ಆಪತ್ತು ತರುವಂತೆ ವರ್ತಿಸಿದ ಜನರನ್ನು ಹತೋಟಿಗೆ ತರಲು ಪೊಲೀಸರು ಅಂತಿಮವಾಗಿ ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *